ಜಮ್ಮು ಕಾಶ್ಮೀರದ ಮುಂದಿನ ಸಿಎಂ ಉಮರ್ ಅಬ್ದುಲ್ಲಾ : ಫಾರೂಕ್ ಅಬ್ದುಲ್ಲಾ ಘೋಷಣೆ

Update: 2024-10-08 08:40 GMT
ಉಮರ್‌ ಅಬ್ದುಲ್ಲಾ | Photo : PTI

ಶ್ರೀನಗರ : "ಜಮ್ಮು ಕಾಶ್ಮೀರದ ಮುಂದಿನ ಸಿಎಂ ಉಮರ್ ಅಬ್ದುಲ್ಲಾ" , ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ.

ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, “ಜನರು ತಮ್ಮ ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ”, ಎಂದು  ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News