ಬಜೆಟ್ ನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೊಡುಗೆ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು 60 ಕೋಟಿ ಅನುದಾನ ಘೋಷಿಸಲಾಗಿದೆ.

-ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡಲು ಶೇ 2 ಬಡ್ಡಿ ದರದಲ್ಲಿ ಸಾಲ.

-ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ ಐದು ಕೋಟಿ ವೆಚ್ಚದಲ್ಲಿ ಸ್ಥಾಪನೆ.

-ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆ ಎ ಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ.

-ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದ ವರಗೆ ಸಾಲ.

Update: 2023-07-07 07:47 GMT

Linked news