ವಯನಾಡ್ ಭೂ ಕುಸಿತದಲ್ಲಿ ಮೃತರ ಸಂಖ್ಯೆ 43ಕ್ಕೆ ಏರಿಕೆ

ವಯನಾಡ್: ಭಾರಿ ಮಳೆಯಿಂದಾಗಿ ಕೇರಳದ ವಯನಾಡ್ ಜಿಲ್ಲೆಯಲ್ಲಿ ಕೇವಲ 4 ಗಂಟೆಗಳ ಅಂತರದಲ್ಲಿ ಸಂಭವಿಸಿದ ಮೂರು ಭೂ ಕುಸಿತಗಳಿಂದ ಇಲ್ಲಿಯವರೆಗೆ ಕನಿಷ್ಠ ಪಕ್ಷ 43 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.

ಮೆಪ್ಪಾಡಿ ಬಳಿಯ ಗಿರಿ ಶ್ರೇಣಿಗಳಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಹಲವಾರು ರಕ್ಷಣಾ ತಂಡಗಳು ತೊಡಗಿಕೊಂಡಿವೆ.

Update: 2024-07-30 06:37 GMT

Linked news