ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ 69 ನೇ ಕನ್ನಡ ರಾಜ್ಯೋತ್ಸವ ಆಚರಣೆ
ಚಾಮರಾಜನಗರ: ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ 69 ನೇ ಕನ್ನಡ ರಾಜ್ಯೋತ್ಸವ ವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಚಾಮರಾಜನಗರ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ರಾಷ್ಟ್ರ ಹಾಗೂ ನಾಡ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಪೊಲೀಸ್ ಪೆರೇಡ್ ಮೈದಾನದಲ್ಲಿ ವಿವಿಧ ತುಕಡಿ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ರಾಷ್ಟ್ರಪತಿ ಮಹಾತ್ಮಗಾಂಧಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಭುವನೇಶ್ವರಿ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.
ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಯಿತು. ಬಳಿಕ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್, ಎ.ಆರ್.ಕೃಷ್ಣಮೂರ್ತಿ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾಧಿಕಾರಿ ಶಿಲ್ಪನಾಗ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಕವಿತಾ , ನಗರಸಭೆ ಅಧ್ಯಕ್ಷ ಸುರೇಶ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.