ಚಾಮರಾಜನಗರ | ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ʼಮಾನವ ಸರಪಳಿʼ

Update: 2024-09-15 07:47 GMT

ಚಾಮರಾಜನಗರ : ರಾಜ್ಯ ಸರಕಾರವು ಹಮ್ಮಿಕೊಂಡಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಚಾಮರಾಜನಗರದಿಂದ-ಬೀದರ್ ತನಕ ಮಾನವ ಸರಪಳಿ ನಿರ್ಮಿಸುವ ಕಾರ್ಯವು ಚಾಮರಾಜನಗರದಿಂದ ಆರಂಭಗೊಂಡಿತು.

ಚಾಮರಾಜನಗರ-ರಾಮಸಮುದ್ರದಲ್ಲಿರುವ ಅಂಬೇಡ್ಕರ್ ಪುತ್ತಳಿ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಮಾಜಿ ಸಚಿವ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟ, ಶಾಸಕ ಎ.ಆರ್. ಕೃಷ್ಣಮೂರ್ತಿ ಸಹಿತ ವಿವಿಧ ಜನಪ್ರತಿನಿಧಿಗಳು ಮತ್ತು ಸರಕಾರಿ ಅಧಿಕಾರಿಗಳು ಭಾಗವಹಿಸಿ, ಸಂವಿಧಾನ ಪೀಠಿಕೆ ಓದಿದರು.

ಕಾರ್ಯಕ್ರಮ ನಿಮಿತ್ತ ಚಾಮರಾಜನಗರದ ಜೋಡಿರಸ್ತೆಯಲ್ಲಿ ರಸ್ತೆ ಸಂಚಾರ ಬಂದ್ ಮಾಡಲಾಗಿತ್ತು. ರಸ್ತೆಯ ಎರಡೂ ಕಡೆಗಳಲ್ಲಿ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಮತ್ತು ಸಾರ್ವಜನಿಕರು ಕೈ ಕೈ ಹಿಡಿದು ಮಾನವ ಸರಪಳಿ ನಿರ್ಮಿಸಿದರು.

ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕವಿತಾ ಬಿ.ಟಿ, ಸೇರಿದಂತೆ ವಿವಿಧ ಸರಕಾರಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಮೈಸೂರು- ಚಾಮರಾಜನಗರ ಜಿಲ್ಲೆಗಳ ಗಡಿ ಮೂಗೂರು ಕ್ರಾಸ್‌ನಿಂದ ಚಾಮರಾಜನಗರದ ತನಕ ಸುಮಾರು 25 ಕಿ.ಮೀ ಮಾನವ ಸರಪಳಿ ನಿರ್ಮಿಸಿದರು.

 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News