ಚಾಮರಾಜನಗರ| ಬಸ್‌ ಢಿಕ್ಕಿ; ಹಲವು ವಿದ್ಯಾರ್ಥಿಗಳಿಗೆ ಗಾಯ

Update: 2023-11-23 15:52 IST
ಚಾಮರಾಜನಗರ| ಬಸ್‌ ಢಿಕ್ಕಿ; ಹಲವು ವಿದ್ಯಾರ್ಥಿಗಳಿಗೆ ಗಾಯ
  • whatsapp icon

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಬಸ್ಸೊಂದು ಶಾಲಾ ವಿದ್ಯಾರ್ಥಿಗಳ ಮೇಲೆ ನುಗ್ಗಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.

 ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಬಳಿ ಘಟನೆ ನಡೆದಿದ್ದು, ಗಾಯಗೊಂಡ ವಿದ್ಯಾರ್ಥಿಗಳನ್ನು ಕಬ್ಬಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.

ಗುರುವಾರ ಬೆಳಿಗ್ಗೆ ಎಂದಿನಂತೆ  ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಡೆಗೆ ಕೊಡಗಾಪುರ ಗ್ರಾಮದ ಕಡೆಯಿಂದ ಬಂದ ಸಾರಿಗೆ ಬಸ್ ಏಕಾಏಕಿ ನುಗ್ಗಿದ ಪರಿಣಾಮ ತಪ್ಪಿಸಿಕೊಳ್ಳಲು ಓಡಿದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಒಬ್ಬ ವಿದ್ಯಾರ್ಥಿಗೆ ತಲೆ ಮತ್ತು ಮುಖದ ಭಾಗಕ್ಕೆ ತೀವ್ರತರವಾದ ಗಾಯವಾಗಿದ್ದು ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯಾರ್ಥಿಗಳ ಈ ಸ್ಥಿತಿಗೆ ಕಾರಣನಾದ ಬಸ್ ಚಾಲಕನ ವಿರುದ್ಧ ಪೋಷಕರು ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News