ಚಾಮರಾಜನಗರ: ನಿರಂತರ ಮಳೆ; ಜಿಲ್ಲಾದ್ಯಂತ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ
Update: 2024-12-02 03:13 GMT
ಚಾಮರಾಜನಗರ: ಫೆಂಗಲ್ ಚಂಡಮಾರುತ ಎಫೆಕ್ಟ್ ನಿಂದ ಚಾಮರಾಜನಗರ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಇಂದು ( ಡಿ.2)ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತು ಪಡಿಸಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.
ಇಂದಿನ ರಜೆ ಅವಧಿಯನ್ನು ಭಾನುವಾರ (ಡಿ. 8) ತರಗತಿ ನಡೆಸಿ ಸರಿದೂಗಿಸಲಾಗುವುದೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.