ಚಾಮರಾಜನಗರ | ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿ

Update: 2025-03-01 11:10 IST
ಚಾಮರಾಜನಗರ | ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿ
  • whatsapp icon

ಚಾಮರಾಜನಗರ: ಕಾರು ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

 

ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಹಾಗೂ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದ ಮೂವರು ಪುರುಷರು ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರು ಮಂಡ್ಯ ಮೂಲದವರು ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

 

ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ಬರುತ್ತಿದ್ದರೆನ್ನಲಾಗಿದೆ.

ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News