ಚಾಮರಾಜನಗರ: ಪೊಲೀಸ್ ಕಾನ್ ಸ್ಟೇಬಲ್ ಮನೆಯಿಂದ ನಗ-ನಗದು ಕಳವು

Update: 2024-10-17 10:14 GMT

ಚಾಮರಾಜನಗರ: ಪಟ್ಟಣದಲ್ಲಿ ವಾವಿದ್ದ ಪೊಲೀಸ್ ಪೇದೆಯೊಬ್ಬರ ಮನೆಗೆ ನುಗ್ಗಿದ ಕಳ್ಳರು ನಗ-ನಗದು ಕಳವುಗೈದ ಘಟನೆ ವರದಿಯಾಗಿದೆ.

ಚಾಮರಾಜನಗರದ ಸೇವಾಭಾರತಿ ಶಾಲೆಯ ಮುಂಭಾಗದಲ್ಲಿ ವಾಸವಿರುವ ಪಟ್ಟಣ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಮನುಕುಮಾರ್ ಎಂಬುವರ ಮನೆಯಲ್ಲಿ 93 ಗ್ರಾಂ ಚಿನ್ನಾಭರಣ, 1 ಕೆ.ಜಿ 300 ಗ್ರಾಂ ಬೆಳ್ಳಿ ಹಾಗೂ 40 ಸಾವಿರ ರೂ. ನಗದು ಕಳವಾಗಿದೆಮನುಕುಮಾರ್ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸದಸ್ಯರೊಂದಿಗೆ ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಬಾಗಿಲು ಮುರಿದು ಈ ಕಳವು ಕೃತ್ಯ ನಡೆದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ, ಇನ್ ಸ್ಪೆಕ್ಟರ್ ರಾಜೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News