ಚಾಮರಾಜನಗರ: ಹಾಸ್ಟೆಲ್ ನ ಅಡುಗೆ ಸಹಾಯಕ ಆತ್ಮಹತ್ಯೆ

Update: 2024-10-14 03:54 GMT

ಚಾಮರಾಜನಗರ: ಹಾಸ್ಟೆಲ್ ಗ್ರಂಥಾಲಯಲ್ಲಿ ಅಡುಗೆ ಸಹಾಯಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದ ಪ್ರಮೋದ್ (27) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.  ಆತ್ಮ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು ಆಗಮಿಸಿದ್ದು, ಮೃತದೇಹವನ್ನು ಮರಣೊತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News