ಚಾಮರಾಜನಗರ: ಇಬ್ಬರು ಮಕ್ಕಳೊಂದಿಗೆ ಗೃಹಿಣಿ ಆತ್ಮಹತ್ಯೆ

Update: 2024-03-04 05:14 GMT

ಚಾಮರಾಜನಗರ : ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಗೃಹಿಣಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಮೆ ಮಾಡಿಕೊಂಡಿರುವ ಧಾರಣ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಹೊರೆಯಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಆತ್ಮಹತ್ಮೆಗೈದ ಮಹಿಳೆಯನ್ನು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕೋಣನೂರು ಗ್ರಾಮದ ಜ್ಯೋತಿ (29) ಎಂದು ಗುರುತಿಸಲಾಗಿದೆ. ಕಳೆದ 12 ವರ್ಷಗಳ ಹಿಂದೆ ಹೊರೆಯಾಲ ಗ್ರಾಮದ ಯೋಗೇಶ್ ರವರೊಂದಿಗೆ ವಿವಾಹವಾಗಿತ್ತು. ಪತಿ ಪತ್ನಿಯರ ನಡೆವೆ ಯಾವುದೇ ತರಹದ ವಿರಸವಿರಲಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮೃತ ಜ್ಯೋತಿಗೆ ಕಳೆದ ಕೆಲವು ವರ್ಷಗಳಿಂದ ಹೊಟ್ಟೆ ನೋವು ಇತ್ತು. ವೈದ್ಯರ ಬಳಿ ತೋರಿಸಿ ಚಿಕಿತ್ಸೆ ಪಡೆದರೂ ಹೊಟ್ಟೆ ನೋವು ಕಡಿಮೆ ಆಗಿರಲಿಲ್ಲ ಎನ್ನಲಾಗಿದೆ.

ಭಾನುವಾರ ಪತಿ ಯೋಗೇಶ್ ತನ್ನ ಸ್ನೇಹಿತನ ನಿಶ್ಚಿತಾರ್ಥಕ್ಕೆ ಹೋಗಿದ್ದಾಗ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದ್ದು, ತನ್ನ ಇಬ್ಬರು ಮಕ್ಕಳಾದ ಬಾಂದವ್ಯ (7) ಹಾಗೂ ಮಾನಸ (3) ರನ್ನು ಮೊದಲಿಗೆ ನೇಣಿಗೆ ಹಾಕಿ ನಂತರ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ.

ಘಟನೆ ನಡೆದು ಕೆಲ ಸಮಯದ ಬಳಿಕ ಮೃತ ಜ್ಯೋತಿಯವರ ಅಣ್ಣ ಮನೆಗೆ ಬಂದಾಗ ಸಹೋದರಿ ಮತ್ತು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದ್ದು, ತಕ್ಷಣವೇ ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಬೇಗೂರು ಪೊಲೀಸರು ಮೃತ ದೇಹಗಳನ್ನು ಕೆಳಗಿಳಿಸಿ, ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News