ಚಾಮರಾಜನಗರ| ಬರ ನಿರ್ವಹಣೆ ಕಾಮಗಾರಿಗಳಿಗೆ ಹಣಕಾಸಿನ ಯಾವುದೇ ತೋಂದರೆ ಇಲ್ಲ: ಸಚಿವ ವೆಂಕಟೇಶ್

Update: 2023-12-22 17:05 GMT

ಹನೂರು: ಬರ ನಿರ್ವಹಣೆಗೆ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆ ಮಾಡಿದ್ದು,  ಬರ ನಿರ್ವಹಣೆ ಕಾಮಗಾರಿಗಳಿಗೆ ಹಣಕಾಸಿನ ಯಾವುದೇ ತೋಂದರೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ತಿಳಿಸಿದರು.

ಚಾಮರಾಜನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ನೇತೃತ್ವದಲ್ಲಿ ಹನೂರು ಪಟ್ಟಣದ ಜಿ.ವಿ ಗೌಡ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬರನಿರ್ವಹಣೆ ಮತ್ತು ಪರಿಸ್ಥಿತಿ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ತಾತ್ಕಲಿಕವಾಗಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡುವುದಕ್ಕಿಂತ ಶಾಶ್ವತವಾಗಿ ನೀರಿನ ಸಮಸ್ಯೆ ನಿವಾರಣೆಯಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಜರುಗಿಸಿದರೆ ಆ ಗ್ರಾಮಕ್ಕೂ ಶಾಶ್ವತವಾಗಿ ಅನುಕೂಲವಾಗುತ್ತದೆ ಎಂದರು.

ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಜಾನುವಾರುಗಳಿಗೆ ಮೇವಿನ ಸಮಸ್ಯೆಯಾಗದಂತೆ ಮುನ್ನಚ್ಚರಿಕೆಯಾಗಿ ಅಗತ್ಯ ಕ್ರಮಕೈಗೂಳ್ಳಿ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಇನ್ನೂ ಹೆಚ್ಚಿನ ಅನುದಾನವನ್ನು ನೀಡಲು ಸಿದ್ದವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, , ಜಿಲ್ಲಾಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೊ, ಹನೂರು ತಾಲೂಕು ತಹಸಿಲ್ದಾರ್ ಗುರುಪ್ರಸಾದ್, ಕೊಳ್ಳೇಗಾಲ ತಾಲೂಕು ತಹಸಿಲ್ದಾರ್ ಮಂಜುಳಾ, ಇಒ ಉಮೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಪ್ರಕಾಶ್, ಡಿವೈಸ್ಪಿ ಸೋಮೇಗೌಡ, ಹನೂರು ವಿಧಾನಸಭಾ ಕ್ಷೇತ್ರದ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News