ಚಾಮರಾಜನಗರ | ಅಬಕಾರಿ ಅಧಿಕಾರಿಗಳ ದಾಳಿ : 98 ಕೋಟಿ ರೂ.ಗೂ ಹೆಚ್ಚು ಮೊತ್ತದ ಮದ್ಯ ವಶ

Update: 2024-04-03 15:09 GMT
ಚಾಮರಾಜನಗರ | ಅಬಕಾರಿ ಅಧಿಕಾರಿಗಳ ದಾಳಿ : 98 ಕೋಟಿ ರೂ.ಗೂ ಹೆಚ್ಚು ಮೊತ್ತದ ಮದ್ಯ ವಶ
  • whatsapp icon

ಚಾಮರಾಜನಗರ: ಅಬಕಾರಿ ಅಧಿಕಾರಿಗಳು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ‌ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಮ್ಮಾವು ಬಳಿ ದಾಸ್ತಾನಿಗಿಂತ ಹೆಚ್ಚುವರಿಯಾಗಿ ಶೇಖರಿಸಿಟ್ಟಿದ್ದ 98 ಕೋಟಿ ರೂ.ಗೂ ಹೆಚ್ಚು ಮೊತ್ತದ ಮದ್ಯವನ್ನು ವಶಪಡಿಸಿಕೊಂಡಿದ್ದು ವರದಿಯಾಗಿದೆ.

ಪ್ರಕರಣದಲ್ಲಿ 17 ಆರೋಪಿಗಳನ್ನು ಗುರುತಿಸಲಾಗಿದ್ದು, ಅವರೆಲ್ಲರೂ ತಲೆ ಮರೆಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಜಿಲ್ಲಾಧಿಕಾರಿಗಳ ಅನುಮತಿ ಕೋರಿದ್ದಾರೆ ಎನ್ನಲಾಗಿದೆ.

ನಂಜನಗೂಡು ತಾಲ್ಲೂಕು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆ ವ್ಯಾಪ್ತಿಗೆ ಬರುವ ಹಿನ್ನಲೆಯಲ್ಲಿ ಪೊಲೀಸರು ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿ ಕೋರಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News