ಚಾಮರಾಜನಗರ: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸರೆ
Update: 2024-01-20 07:45 GMT
ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ರೈತರು ಮತ್ತು ಸಾರ್ವಜನಿಕರಿಗೆ ತೆಲೆ ನೋವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕುಂದಕೆರೆ ವಲಯದ ಬಾಚಹಳ್ಳಿ ಬಳಿ ಚಿರತೆಯೊಂದು ಗ್ರಾಮಕ್ಕೆ ಬಂದು ಜಾನುವಾರುಗಳನ್ನು ಕೊಂದು ಹಾಕುತ್ತಿರುವ ಸಂಬಂಧ ಅರಣ್ಯ ಅಧಿಕಾರಿಗಳು ಚಿರತೆ ಸಂಚರಿಸಿದ ಸ್ಥಳವೊಂದರಲ್ಲಿ ಬೋನಿಟ್ಟು ಚಿರತೆ ಸೆರೆಗೆ ಮುಂದಾಗಿದ್ದರು.
ಕೊನೆಗೂ ಚಿರತೆ ಶನಿವಾರ ಅರಣ್ಯಾಧಿಕಾರಿಗಳು ಇಟ್ಟ ಬೋನಿಗೆ ಬಿದ್ದಿದೆ. ಬಂಡೀಪುರ ಅರಣ್ಯಾಧಿಕಾರಿ ಡಾ.ರಮೇಶ್ ಕುಮಾರ್ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ ಎನ್.ಪಿ. ನವೀನ್ ಕುಮಾರ್ ಮತ್ತು ಸಿಬ್ಬಂದಿಗಳು ಚಿರತೆ ಸೆರೆಗೆ ಕಾರ್ಯತಂತ್ರ ರೂಪಸಿದ್ದರು.