ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಭೋಸ್ ಭರ್ಜರಿ ಗೆಲುವು

Update: 2024-06-04 12:06 GMT

Photo : X/@SunilBo45915204

ಚಾಮರಾಜನಗರ : ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್  ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಚುನಾವಣಾ ಅಧಿಕಾರಿಗಳು ಅಧಿಕೃತವಾಗಿ ಘೋಷಣೆ ಮಾಡುವುದು ಬಾಕಿ ಇದೆ.

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ರವರ ಪುತ್ರ ಸುನಿಲ್ ಬೋಸ್ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಎಸ್.ಬಾಲರಾಜ್ ಅವರು ಹೀನಾಯವಾಗಿ ಸೋಲು ಕಂಡಿದ್ದಾರೆ.

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿನ 8 ವಿಧಾನ ಸಭಾ ಕ್ಷೇತ್ರಗಳಲ್ಲಿ 7 ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಶಾಸಕರಿದ್ದು‌, ಹನೂರು ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಶಾಸಕರಿದ್ದರು.

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಬಿಜೆಪಿಯಿಂದ ದಿ.ವಿ ಶ್ರೀನಿವಾಸ್ ಪ್ರಸಾದ್ ಅಲ್ಪ ಮತಗಳಿಂದ ಗೆಲುವು ಸಾಧಿಸಿದ್ದರು. ಪ್ರಸ್ತುತ ಚುನಾವಣೆಯ ವೇಳೆಯಲ್ಲಿ ರಾಜಕೀಯ ಜೀವನದಿಂದ ನಿವೃತ್ತಿಗೊಳಿಸಿದ್ದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಮತದಾನದ ಕೆಲವೇ ದಿನಗಳು ಇರುವಾಗಲೇ ನಿಧನರಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News