ಗುಂಡ್ಲುಪೇಟೆ | ಬೈಕಿಗೆ ಟಿಪ್ಪರ್ ಢಿಕ್ಕಿ: ಬೈಕ್ ಸವಾರನ ಕಾಲಿಗೆ ಗಂಭೀರ ಗಾಯ
Update: 2024-12-04 06:29 GMT
ಚಾಮರಾಜನಗರ: ಟಿಪ್ಪರ್ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕಾಲು ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಆರ್.ಟಿ.ಒ. ಸರ್ಕಲ್ ನಲ್ಲಿ ಈ ಅಪಘಾತ ಸಂಭವಿಸಿದೆ. ಕೇರಳದ ಮಲ್ಲಪುರಂ ನಿವಾಸಿ ಜಾಸ್ಮೀನ್ (35) ಕಾಲು ಕಳೆದುಕೊಂಡಿರುವ ಯುವಕ.
ಟಿಪ್ಪರ್ ಬೈಕ್ ಗೆ ಗುದ್ದಿ 20 ಮೀಟರ್ ದೂರು ಎಳೆದೊಯ್ದಿದೆ. ಇದರಿಂದ ಬೈಕ್ ಸವಾರ ಜಾಸ್ಮೀನ್ ಗೆ ಕಾಲು ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ಬೆನ್ನಲ್ಲೇ ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಗಾಯಾಳು ಜಾಸ್ಮೀನ್ ನನ್ನು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕಳುಹಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿರುವ ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಚಾಲಕನ ಬಂಧನಕ್ಕೆ ಬಲೆ ಬೀಸಿದ್ದಾರೆ.