ಹನೂರು | ತುಳಸೀಕೆರೆ ಗ್ರಾಮದಲ್ಲಿ ರಸ್ತೆ ಇಲ್ಲದೆ ಜನರ ಪರದಾಟ: ಡೋಲಿಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು

Update: 2025-04-02 14:10 IST
ಹನೂರು | ತುಳಸೀಕೆರೆ ಗ್ರಾಮದಲ್ಲಿ ರಸ್ತೆ ಇಲ್ಲದೆ ಜನರ ಪರದಾಟ: ಡೋಲಿಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
  • whatsapp icon

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಸಮೀಪ ಕಾಡಂಚಿನಲ್ಲಿರುವ ತುಳಸೀಕೆರೆ ಗ್ರಾಮದಲ್ಲಿ ರಸ್ತೆ ವ್ಯವಸ್ಥೆ ಇಲ್ಲದೆ, ಸಾರಿಗೆ ವ್ಯವಸ್ಥೆ ಇಲ್ಲದೆ ಜನರು ಪರದಾಟ ನಡೆಸುತ್ತಿದ್ದಾರೆ. ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಸಾಗಿಸುವುದಂತೂ ದುಸ್ತರವಾಗಿದೆ. ವಾಂತಿಭೇದಿ ಸಮಸ್ಯೆಯಿಂದ ತೀವ್ರ ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರನ್ನು ಡೋಲಿಯ ಮುಖಾಂತರ ಹೊತ್ತೊಯ್ದು ಆಸ್ಪತ್ರೆಗೆ ದಾಖಲಿಸಿದ ಘಟನೆ ಜರುಗಿದೆ.

 

ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ದಿಢೀರ್ ವಾಂತಿಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದರು. ಆದರೆ ಗ್ರಾಮಕ್ಕೆ ವಾಹನ ಬರುವಂತಹ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಸಂಬಂಧಿಕರು ಪುಟ್ಟರನ್ನು ಡೋಲಿ ಬಳಸಿ ಹೊತ್ತುಕೊಂಡೇ ಮಲೆ ಮಹದೇಶ್ವರ ಬೆಟ್ಟಕ್ಕೆ ಕರೆತಂದರು. ಬಳಿಕ ಅಲ್ಲಿಂದ ವಾಹನದ ಮೂಲಕ ತಮಿಳುನಾಡಿನ ಕೊಳತ್ತೂರು ಆಸ್ಪತ್ರೆಗೆ ಕರೆದೊಯ್ದಯ ಚಿಕಿತ್ಸೆ ಕೊಡಿಸಿದ್ದಾರೆ.

ತುಳಸಿಕೆರೆ ಗ್ರಾಮಕ್ಕೆ ಸುಸರ್ಜಿತ ರಸ್ತೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸಿಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ಮಲೆ ಮಹದೇಶ್ವರ ಬೆಟ್ಟ ಹಾಗೂ ತುಳಸಿಕೆರೆ ಗ್ರಾಮದ ರಸ್ತೆ ಮಧ್ಯದಲ್ಲಿ ಧರಣಿ ನಡೆಸಿದರು.

 

ಈ ವೇಳೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕೆಂಪಣ್ಣ ಮಾತನಾಡಿ, ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಾಡಂಚಿನ ಗ್ರಾಮಗಳಿಗೆ ನಮ್ಮನ್ನು ಆಳ್ವಿಕೆ ಮಾಡಿದ ಸರಕಾರಗಳು ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿದೆ. ನಾವು ವನ್ಯ ಪ್ರಾಣಿಗಳಂತೆ, ಸೌಕರ್ಯಗಳೆಲ್ಲಿದೆ ಜೀವನ ಸಾಗಿಸಬೇಕಾಗಿದೆ. ನಾವು ಅನೇಕ ಭಾರಿ ಸಚಿವರನ್ನು, ಶಾಸಕರನ್ನು ಅಧಿಕಾರಿಗಳ ಬಳಿ ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ. ಆದರೆ ಇದುವರೆಗೆ ಯಾವುದೇ ಸರಕಾರಗಳು ನಮ್ಮ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡುವಲ್ಲಿ ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಕಳೆದ ವರ್ಷ ಉತ್ತಮ ಮಳೆಯಾಗಿರುವುದರಿಂದ ರಸ್ತೆಯಲ್ಲಿನ ಮಣ್ಣು ಕೊಚ್ಚಿ ಹೋಗಿ ಕಲ್ಲುಗಳೆಲ್ಲ ಎದ್ದು ಬಂದಿವೆ . ಈ ಸಂಬಂಧ ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರು ಇದುವರೆಗೂ ಯಾವುದೇ ರೀತಿ ಸ್ಪಂದಿಸಿಲ್ಲ ಇನ್ನು ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News