ಕೊಳ್ಳೇಗಾಲ | ಸರಣಿ ಅಪಘಾತ: ಇಬ್ಬರು ಮೃತ್ಯು, 15 ಮಂದಿಗೆ ಗಾಯ
Update: 2025-03-25 15:35 IST

ಕೊಳ್ಳೇಗಾಲ: ಬೈಕ್, ಟಾಟಾ ಏಸ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಕೊಳ್ಳೇಗಾಲ ತಾಲೂಕಿನ ಬಾಣೂರು ಗ್ರಾಮದ ರಾಜಮ್ಮ(53) ಶೃತಿ (30) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪ್ರಕಾಶ್, ಬಸ್ ಚಾಲಕ ರಾಜಶೇಖರ್ ಹಾಗೂ ಟಾಟಾ ಏಸ್ ನಲ್ಲಿದ್ದ ಬಾಣೂರು ಗ್ರಾಮದ 13 ಮಂದಿ ಗಾಯಗೊಂಡಿದ್ದು, ಅವರನ್ನು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಸಿಮ್ಸ್ ಮತ್ತು ಮೈಸೂರಿಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.