ಕೊಳ್ಳೇಗಾಲ: ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಸ್ ನಿಲ್ದಾಣ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.
ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಸುಮಾರು 40ರಿಂದ 45 ವರ್ಷದ ವಯಸ್ಸಿನ ವ್ಯಕ್ತಿಯ ಮೃತದೇಹ ಕಾರಿನ ಹಿಂಬದಿ ಸೀಟ್ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವು ಕೊಳೆತು ದುರ್ವಾಸನೆ ಬರುತ್ತಿದೆ.
ಶುಕ್ರವಾರ ಮಧ್ಯಾಹ್ನದಿಂದ ನಿಂತಿರುವ ಕಾರಿನ ಡೋರ್ ನಿಂದ ರಕ್ತ ಕೆಳಗಡೆ ಸುರಿದು ವಾಸನೆ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೊಳ್ಳೇಗಾಲ ಪೊಲೀಸ್ ಇನ್ ಸ್ಪೆಕ್ಟರ್ ಶಿವ ಮಾದಯ್ಯ, ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ ಸ್ಪೆಕ್ಟರ್ ಸುಪ್ರೀತ್, ಅಪರಾಧ ವಿಭಾಗದ ಸಬ್ ಇನ್ ಸ್ಪೆಕ್ಟರ್ ಚಲುವರಾಜು ಹಾಗೂ ಸಿಬ್ಬಂದಿ ಸ್ಥಳಕ್ಕಾಗಿಮಿಸಿ ಪರಿಶೀಲಿಸುತ್ತಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.