ಬಂಡೀಪುರ | ಅಭಯಾರಣ್ಯದಲ್ಲಿ ಕಾರು ಢಿಕ್ಕಿಯಾಗಿ ಜಿಂಕೆ, ಸೀಳುನಾಯಿ ಸಾವು: ಕಾರು ಚಾಲಕನ ಬಂಧನ
Update: 2024-06-10 06:47 GMT
ಚಾಮರಾಜನಗರ, ಜೂ.10: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಭಯಾರಣ್ಯದಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆ ಮತ್ತು ಸೀಳುನಾಯಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಮದ್ದೂರು ವಲಯದಲ್ಲಿ ನಡೆದಿದೆ. ಈ ಸಂಬಂಧ ಕಾರು ಚಾಲಕನನ್ನು ಬಂಧಿಸಲಾಗಿದೆ.
ಬತ್ತೇರಿಯ ಸ್ಟೀಫನ್ ಬಂಧಿತ ಕಾರು ಚಾಲಕ.
ಸ್ಟೀಫನ್ ಕಾರಿನಲ್ಲಿ ಕೇರಳಕ್ಕೆ ತೆರಳುತ್ತಿದ್ದ ವೇಳೆ ಬಂಡೀಪುರ ಅಭಯಾರಣ್ಯದ ಮದ್ದೂರು ವಲಯದಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕ ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ್ದರಿಂದ ಎರಡೂ ಪ್ರಾಣಿಗಳು ಸಾವನ್ನಪ್ಪಿವೆ ಎಂದು ಆರೋಪಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಟೀಫನ್ ರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಸಂದರ್ಭದಲ್ಲಿ ಎಸಿಎಫ್ ರವೀಂದ್ರ, ಆರ್ ಎಫ್ ಒ ಮಲ್ಲೇಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.