ಚಾಮರಾಜನಗರ | ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ದಸಂಸ ಪ್ರತಿಭಟನೆ

Update: 2025-01-09 17:46 GMT

ಚಾಮರಾಜನಗರ : ಜಿಲ್ಲೆಯಲ್ಲಿ ಮಾದಿಗ ಜನಾಂಗಕ್ಕೆ ಸ್ಮಶಾನ ಭೂಮಿ ಮಂಜೂರು ಮಾಡುವುದು ಹಾಗೂ ಹಾಲಿ ಇರುವ ಸ್ಮಶಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸ್ವಾಭಿಮನಿ ಪ್ರೊ.ಬಿ.ಕೃಷ್ಣಪ್ಪ ಬಣ) ವತಿಯಿಂದ ಚಾಮರಾಜನಗ ನಗರದಲ್ಲಿ ಅಣಕು ಶವಯಾತ್ರೆ ನಡೆಸಿ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. 

ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಅಣಕು ಶವಯಾತ್ರೆ ಹೊತ್ತು ಮೆರವಣಿಗೆಯಲ್ಲಿ ಪಚ್ಚಪ್ಪ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ಅಣಕು ಶವವನ್ನು ವಶಪಡಿಸಿಕೊಂಡರು.

ಈಗಾಗಲೇ ಮಾದಿಗ ಸಮುದಾಯದವರು ವಾಸಿಸುವ ಕೆಲವು ಗ್ರಾಮಗಳಲ್ಲಿ ನೀಡಿರುವ ಸ್ಮಶಾನಗಳು ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಲು ಕ್ರಮವಹಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಮಾದಿಗ ಜನಾಂಗದವರು ವಾಸಿಸುವ ಗ್ರಾಮಗಳಲ್ಲಿ ಸ್ಮಶಾನಗಳು ಹಾಗೂ ಸ್ಮಶಾನಗಳ ಮೂಲಭೂತ ಸೌಕರ್ಯಗಳ ಬೇಡಿಕೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಮಾದಿಗ ಸಮಾಜದವರು ವಾಸಿಸುವ ಗ್ರಾಮಗಳನ್ನು ಗುರುತಿಸಿ ಸ್ಮಶಾನಗಳನ್ನು ನೀಡುವುದು ಹಾಗೂ ಈಗಾಗಲೇ ಸ್ಮಶಾನಗಳನ್ನು ನೀಡಿರುವ ಗ್ರಾಮಗಳಲ್ಲಿ ಸ್ಮಶಾನಗಳನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ  ಜಿಲ್ಲಾ ಸಂಚಾಲಕ ಬೆಳ್ಳಿಯಪ್ಪ, ಮುಖಂಡರಾದ ಅರಕಲವಾಡಿ ನಾಗೇಂದ್ರ, ಮಹದೇವಸ್ವಾಮಿ, ಸರ್ಕಾರ, ಜಿಲ್ಲಾಡಳಿತ ವಿರುದ್ಧ ರಾಚಪ್ಪ, ಮಾದೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News