ಚಾಮರಾಜನಗರ | ಚಾಲಕನಿಗೆ ಮೂರ್ಛೆ ಬಂದು ಮರಕ್ಕೆ ಢಿಕ್ಕಿ ಹೊಡೆದ ಬಸ್‌; ಐವರಿಗೆ ಗಾಯ

Update: 2025-02-09 15:24 IST
ಚಾಮರಾಜನಗರ | ಚಾಲಕನಿಗೆ ಮೂರ್ಛೆ ಬಂದು ಮರಕ್ಕೆ ಢಿಕ್ಕಿ ಹೊಡೆದ ಬಸ್‌; ಐವರಿಗೆ ಗಾಯ
  • whatsapp icon

ಚಾಮರಾಜನಗರ: ಚಾಲಕ ಮೂರ್ಛೆ ಬಿದ್ದು ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್​ ಮರಕ್ಕೆ ಢಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ರವಿವಾರ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್​​ ಇದಾಗಿದ್ದು, ಚಾಲಕನಿಗೆ ದಿಢೀರ್ ಮೂರ್ಛೆ ರೋಗ ಕಾಣಿಸಿಕೊಂಡಿದೆ. ಪರಿಣಾಮ, ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮುಂಭಾಗದಲ್ಲಿ ಕುಳಿತಿದ್ದ ಐವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್​​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News