ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ವಾಹನ ಪಲ್ಟಿ: 5 ವಿದ್ಯಾರ್ಥಿಗಳಿಗೆ ಗಾಯ

Update: 2024-12-21 16:36 GMT

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಕ್ಕೆ ಬಂದಿದ್ದ ಶಾಲಾ ವಿದ್ಯಾರ್ಥಿಗಳಿದ್ದ ವಾಹನ ಪಲ್ಟಿಯಾಗಿದ್ದು, ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶನಿವಾರ ನಗರದ ಹೊರವಲಯದ ಕೈಮರ ಚೆಕ್‍ಪೋಸ್ಟ್ ಬಳಿ ನಡೆದಿದೆ.

ಮೈಸೂರಿನ ವೇಣುಗೋಪಾಲಸ್ವಾಮಿ ಶಾಲಾ ವಿದ್ಯಾರ್ಥಿಗಳು ಶಾಲಾ ಶಿಕ್ಷಕರೊಂದಿಗೆ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಕ್ಕೆ ಆಗಮಿಸಿದ್ದರು. ಮೈಸೂರಿನಿಂದ ಚಿಕ್ಕಮಗಳೂರುವರೆಗೂ ಬಸ್‍ನಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಚಿಕ್ಕಮಗಳೂರು ನಗರದಿಂದ ತೂಫಾನ್ ವಾಹನ ಬಾಡಿಗೆ ಪಡೆದು ಮುಳ್ಳಯ್ಯನಗಿರಿ ಪ್ರದೇಶಕ್ಕೆ ತರಳುತ್ತಿದ್ದರು.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದ 12 ವಿದ್ಯಾರ್ಥಿಗಳ ಪೈಕಿ 5 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಮುಳ್ಳಯ್ಯನಗಿರಿಗೆ ಸಾಗುವ ಮಾರ್ಗದ ಕೈಮರ ಚೆಕ್‍ಪೋಸ್ಟ್ ನ ಸ್ವಲ್ಪ ದೂರದಲ್ಲಿ ಘಟನೆ ಸಂಭವಿಸಿದೆ

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News