ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಅನೈತಿಕ ಪೊಲೀಸ್ ಗಿರಿ, ಯುವಕನಿಗೆ ಹಲ್ಲೆ

Update: 2024-01-09 18:40 GMT

ಮೂಡಿಗೆರೆ : ಯುವತಿಯ ಜೊತೆ ನಿಂತಿದ್ದ ಯುವಕನಿಗೆ ಸಂಘಪರಿವಾರದ ಕಾರ್ಯಕರ್ತರೆನ್ನಲಾದ ತಂಡ ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ವರದಿಯಾಗಿದೆ. ಘಟನೆಯ ವೀಡಿಯೊ ಬಸ್ ನಿಲ್ದಾಣದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ಮುನೀರ್ ಎಂಬವರು ಹಲ್ಲೆಗೊಳಗಾದ ಯುವಕ. ಬಸ್ ನಿಲ್ದಾಣದಲ್ಲಿ ಯುವತಿಯ ಜೊತೆ ನಿಂತಿದ್ದಾಗ, ಕಾರಿನಲ್ಲಿ ಬಂದ ತಂಡ ಹಲ್ಲೆ ಮಾಡಿದೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News