ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರಿನ ಯುವಕ ಮೃತ್ಯು
Update: 2023-08-01 07:02 GMT
ಚಿಕ್ಕಮಗಳೂರು: ತೀರ್ಥ ಯಾತ್ರೆಗೆ ತೆರಳಿದ್ದ ಯುವಕ ಅಸ್ವಸ್ಥಗೊಂಡು ಕೇದಾರನಾಥದಲ್ಲಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೃತ ಯುವಕನನ್ನು ಜನ್ನಾಪುರ ಗ್ರಾಮದ ಗಿರೀಶ್ (25) ಎಂದು ಗುರುತಿಸಲಾಗಿದೆ. ಮೂಡಿಗೆರೆಯಲ್ಲಿ ಅಡಿಗೆ ವೃತ್ತಿ ಮಾಡುತ್ತಿದ್ದ ಗಿರೀಶ್ ಕಳೆದ ವಾರವಷ್ಟೇ ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ ಎನ್ನಲಾಗಿದೆ.
ಮೃತ ದೇಹವನ್ನು ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯ ಶ ವಾಗಾರದಲ್ಲಿರಿಸಲಾಗಿದ್ದು, ಕೇದಾರನಾಥ ಪೊಲೀಸರು ಗಿರೀಶ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.