ಚಾರ್ಮಾಡಿ | ಪ್ರಪಾತಕ್ಕೆ ಉರುಳಿದ ಕಾರು; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Update: 2024-02-19 07:46 GMT

ಚಾರ್ಮಾಡಿ : ಜಿಲ್ಲೆಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಕಾರೊಂದು ಪಲ್ಟಿಯಾಗಿ ಪ್ರಪಾತಕ್ಕೆ ಬಿದ್ದಿದ್ದರಿಂದ ಹಲವರು ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ವರದಿಯಾಗಿದೆ.

ಆರು ಮಂದಿ ಪ್ರವಾಸಿಗರಿದ್ದ ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಉರುಳಿದೆ. ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ  ಎಂದು ತಿಳಿದು ಬಂದಿದೆ.

ರಸ್ತೆಯಿಂದ ಇಪ್ಪತ್ತು ಅಡಿ ಪ್ರಪಾತಕ್ಕೆ ಬಿದ್ದಿದ್ದರಿಂದ ಕಾರು ಜಖಂ ಆಗಿದ್ದು, ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News