ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ ಮತ್ತೆ ಬೆಂಕಿ ಅವಘಡ; ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹರಸಾಹಸ

Update: 2025-01-25 17:43 IST
ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ ಮತ್ತೆ ಬೆಂಕಿ ಅವಘಡ; ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹರಸಾಹಸ
  • whatsapp icon

ಮೂಡಿಗೆರೆ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅರಣ್ಯದ ಕಲ್ಲು ಪ್ರದೇಶದಲ್ಲಿ ಒಣಗಿರುವ ಹುಲ್ಲು, ಗಿಡಗಂಟಿಗಳಿಗೆ ದುಷ್ಕರ್ಮಿಗಳು ಹಚ್ಚಿರುವ ಬೆಂಕಿ ಪರಿಸರವನ್ನು ವ್ಯಾಪಿಸಿರುವ ಶಂಕೆ ವ್ಯಕ್ತವಾಗಿದೆ.

ಗಾಳಿಯ ವೇಗಕ್ಕೆ ಬೆಂಕಿ ಇನ್ನಷ್ಟು ಪ್ರದೇಶಕ್ಕೆ ವ್ಯಾಪಿಸುತ್ತಿದೆ. ಬೆಂಕಿ ನಿಯಂತ್ರಿಸಲು ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಶುಕ್ರವಾರ ರಾತ್ರಿಯಿಂದ ಬೆಂಕಿ ಹೊತ್ತಿಕೊಂಡಿದೆ. ನಾಲ್ಕು ದಿನಗಳ ಹಿಂದೆ ಚಾರ್ಮಾಡಿ ಘಾಟ್‌ನ ಬಿದಿರುತಳ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು. ಇದೀಗ ಶುಕ್ರವಾರ ರಾತ್ರಿ ಮತ್ತೆ ಬೆಂಕಿ ಹೊತ್ತಿಕೊಂಡಿದೆ.

ಈ ಕಾಡ್ಗಿಚ್ಚಿನಿಂದ ಪ್ರಾಣಿ ಸಂಕುಲ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಅಪಾಯ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ ಮಾರ್ಚ್-ಎಪ್ರಿಲ್‌ನ ಬೇಸಿಗೆಯಲ್ಲಿ ಕಾಡ್ಗಿಚ್ಚು ಹೆಚ್ಚಾಗಿ ಆಗಲಿದೆ. ಆದರೆ ಈ ಬಾರಿ ಕಿಡಿಗೇಡಿಗಳೇ ಬೆಂಕಿ ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಂತವರ ಬಗ್ಗೆ ಸುಳಿವು ಸಿಕ್ಕರೆ ಸೂಕ್ತ ಕ್ರಮ ಕೈಗೊ‍‍ಳ್ಳಬೇಕೆಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

"ಚಾರ್ಮಾಡಿ ಘಾಟ್‌ನಲ್ಲಿ ದುಷ್ಕರ್ಮಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿದ್ದು, ಅವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. ಚಾರ್ಮಾಡಿ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿಲ್ಲ. ಇದು ಕಿಡಿಗೇಡಿಗಳ ಕೃತ್ಯವಾಗಿದ್ದು ಅವರನ್ನು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ಚಾರ್ಮಾಡಿ ಅರಣ್ಯದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಅರಣ್ಯದ ಸುಮಾರು ಗಿಡಮರಗಳು ಸುಟ್ಟು ಹೋಗಿವೆ. ನಮ್ಮ ತಂಡ ಅಲ್ಲಿಯೇ ಬೀಡು ಬಿಟ್ಟಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ"

ರಮೇಶ್ ಬಾಬು, ಡಿಎಫ್‌ಒ ಚಿಕ್ಕಮಗಳೂರು

"ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ಬಿದಿರುತಳ ಮತ್ತು ಸುತ್ತ ಮುತ್ತಲಿನ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಬೆಂಕಿಯಿಂದ ಎಷ್ಟು ಅರಣ್ಯಕ್ಕೆ ಹಾನಿಯಾಗಿದೆ. ಎಷ್ಟು ಹಾನಿ ತಡೆಯಲಾಗಿದೆ ಎಂದು ಕೂಡಲೇ ವರದಿ ಒದಗಿಸಬೇಕು. ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚೆರಿಕೆ ಕ್ರಮ ವಹಿಸಲು ಹಾಗೂ ಅಗ್ನಿಶಾಮಕ ಸಾಧನಗಳನ್ನು ಮತ್ತು ಸಿಬ್ಬಂದಿಯನ್ನು ಸನ್ನದ್ದ ಸ್ಥಿತಿಯಲ್ಲಿರುವಂತೆ ಸೂಚಿಸಲಾಗಿದೆ"

-ಈಶ್ವರ್‌ ಖಂಡ್ರೆ, ಅರಣ್ಯ ಸಚಿವರು

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ತನು ಕೊಟ್ಟಿಗೆಹಾರ

contributor

Similar News