ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ ಹಾವಳಿ ತೀವ್ರ: ಕಾಯಿಲೆ ಬಾಧಿತರ ಸಂಖ್ಯೆ 9ಕ್ಕೆ ಏರಿಕೆ
Update: 2024-02-08 05:31 GMT
ಚಿಕ್ಕಮಗಳೂರು, ಫೆ.8: ಕಾಫಿನಾಡಿನಲ್ಲಿ ಮಂಗನಕಾಯಿಲೆ ಹಾವಳಿ ವ್ಯಾಪಕವಾಗಿ ಹರಡುತ್ತಿದೆ. ಗುರುವಾರ ಮತ್ತೋರ್ವ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆ ಒಟ್ಟು ಸೋಂಕು ಪೀಡಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
9 ಸೋಂಕಿತರ ಪೈಕಿ ಇತ್ತೀಚೆಗೆ ವೃದ್ಧರೊಬ್ಬರು ಬಲಿಯಾಗಿದ್ದು, ನಾಲ್ವರು ಗುಣಮುಖರಾಗಿದ್ದಾರೆ. ಇನ್ನು ನಾಲ್ಕು ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಂಕು ಕಾಣಿಸಿಕೊಂಡ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಮಂಗನಕಾಯಿಲೆ ಹಾವಳಿ ತೀವ್ರಗೊಳ್ಳುತ್ತಿರುವ ಮಧ್ಯೆಯೇ ಡೆಂಗಿ ಜ್ವರ ಕೂಡಾ ಹಬ್ಬುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಡೆಂಗಿ ಜ್ವರ ಬಾಧೆಗೆ ಬುಧವಾರ ರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ.