ಚಿಕ್ಕಮಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪರಾರಿಯಾದ ಕಾರು

Update: 2023-12-13 04:15 GMT

ಚಿಕ್ಕಮಗಳೂರು, ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ನಡೆದಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಎರಡು ದಿನಗಳ ಹಿಂದೆ ನಡೆದಿರುವ ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ತೀವ್ರ ಗಾಯಗಳಾಗಿವೆ. ಅಪಘಾತಕ್ಕೆ ಕಾರಣವಾದ ಕಾರನ್ನು ಅದರ ಚಾಲಕ ಕಾರು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ.

ಸಿಸಿಟಿವಿ ವಿಡಿಯೋದಲ್ಲಿ ಕಾರೊಂದು ನಿಧಾನವಾಗಿ ಚಲಿಸುತ್ತಿದ್ದು ಈ ವೇಳೆ ಹಿಂದಿನಿಂದ ಅತೀ ವೇಗವಾಗಿ ಬಂದ ಕಾರು ಎದುರಿದ್ದ ಕಾರನ್ನು ಹಿಂದಿಕ್ಕುವ ಭರದಲ್ಲಿ ರಸ್ತೆಯ ಬಲಭಾಗದಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದು ನಿಲ್ಲಿಸದೆ ಅದೇ ವೇಗದಲ್ಲಿ ಮುಂದೆ ಸಾಗಿದೆ. ಕಾರು ಢಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಡಿವೈಡರ್ ಗೆ ಬಡಿದು ರಸ್ತೆ ಮೇಲೆ ಬೀಳುವುದು ಕಾಣಿಸುತ್ತದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದೆ. ಗಾಯಾಳು ದ್ವಿಚಕ್ರ ವಾಹನ ಸವಾರನ ಗುರುತು ಪತ್ತೆಯಾಗಿಲ್ಲ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News