ಚಿಕ್ಕಮಗಳೂರು: ಆಟೋ ಪಲ್ಟಿ; ಇಬ್ಬರು ಮೃತ್ಯು, ನಾಲ್ವರಿಗೆ ಗಾಯ

Update: 2024-09-07 06:42 GMT

ಚಿಕ್ಕಮಗಳೂರು: ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟಾಟಾ ಏಸ್ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ಶನಿವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಶ್ರೀಧರ್ (20) ಧನುಷ್ (20) ಮೃತ ಯುವಕರು. ಗಣಪತಿ ತರಲು 9 ಜನ ಯುವಕರು ಗೂಡ್ಸ್ ಆಟೊದಲ್ಲಿ ತೆರಳುತ್ತಿದ್ದಾಗ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ‌ ಘಟನೆ ನಡೆದಿದೆ.

ಇಬ್ಬರು ಯುವಕರ ತಲೆಗೆ ಗಂಭೀರ ಗಾಯಗಳಾಗಿದ್ದು,   ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೂವರು ಯುವಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಹಾಗೂ ಗಾಯಾಳುಗಳೆಲ್ಲರೂ ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.

 ಲಿಂಗದಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News