ಚಿಕ್ಕಮಗಳೂರು | ಬಾಲಕನಿಂದ ಸ್ಕೂಟಿ ಚಾಲನೆ : ಪೋಷಕರಿಗೆ 25 ಸಾವಿರ ರೂ. ದಂಡ

Update: 2025-04-18 23:32 IST
ಚಿಕ್ಕಮಗಳೂರು | ಬಾಲಕನಿಂದ ಸ್ಕೂಟಿ ಚಾಲನೆ : ಪೋಷಕರಿಗೆ 25 ಸಾವಿರ ರೂ. ದಂಡ
  • whatsapp icon

ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ದ್ವಿಚಕ್ರ ವಾಹನ ಚಾಲನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ನೀಡಿದ್ದ ಆತನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿ ಮೂಡಿಗೆರೆ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

ಜಿಲ್ಲೆಯ ಮೂಡಿಗೆರೆ ಪಟ್ಟಣದ ಬಾಪು ನಗರದ ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಗನ ಕೈಗೆ ಸ್ಕೂಟಿ ನೀಡಿದ್ದರು. ಬಾಲಕ ಬೈಕ್ ಓಡಿಸುತ್ತಿದ್ದ ವೇಳೆ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಈ ಸಂಬಂಧ ಬಾಲಕನಿಗೆ ಸ್ಕೂಟಿ ನೀಡಿ ಚಾಲನೆಗೆ ಅವಕಾಶ ನೀಡಿದ್ದ ಆರೋಪದ ಮೇರೆಗೆ ಪೊಲೀಸರು ಬಾಲಕನ ತಂದೆ ಮೊಹಮ್ಮದ್ ಸಿರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News