ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ಚಾಲಕ ಮೃತ್ಯು
Update: 2024-05-23 08:40 GMT
ಚಿಕ್ಕಮಗಳೂರು, ಮೇ 23: ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದ ಪರಿಣಾಮ, ಕಾರಿನೊಳಗೆ ಸಿಲುಕಿದ ಚಾಲಕ ಮೃತಪಟ್ಟ ಘಟನೆ ಅಂಬಳೆಯಲ್ಲಿ ಗುರುವಾರ ನಡೆದಿದೆ.
ಮೃತ ಚಾಲಕನನ್ನು ಅಂಬಳೆ ಗ್ರಾಮದ ದಿನೇಶ್ (33) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು. ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ಕಾರಿನಲ್ಲಿದ್ದ ಸಂತೋಷ್ ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಮೃತದೇಹವನ್ನು ನೀರಿನಿಂದ ಹೊರ ತೆಗೆಯಲಾಗಿದೆ.
ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.