ಚಿಕ್ಕಮಗಳೂರು: ಡೆಂಗಿ ಬಾಧಿತ ಆರು ವರ್ಷದ ಬಾಲಕಿ ಮೃತ್ಯು

Update: 2024-06-29 05:33 GMT

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಜೂ.29: ಡೆಂಗಿ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಿಂದ ವರದಿಯಾಗಿದೆ.

ಸಖರಾಯಪಟ್ಟಣದ ಆಸಿಫ್ ಎಂಬವರ ಪುತ್ರಿ ಸಾನಿಯಾ(6) ಮೃತ ಬಾಲಕಿ.

ಡೆಂಗಿನಿಂದ ಬಳಲುತ್ತಿದ್ದ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ನನ್ನ ಮಗಳಿಗೆ ಆದ ಸ್ಥಿತಿ ಯಾರಿಗೂ ಆಗದಿರಲಿ: ಸರಕಾರ ಎಚ್ಚೆತ್ತುಕೊಳ್ಳಲಿ

ಚಿಕ್ಕಮಗಳೂರಿನಲ್ಲಿ ಡೆಂಗಿ ವ್ಯಾಪಕವಾಗಿ ಹರಡುತ್ತಿದೆ. ಸರಕಾರ ಈ ಬಗ್ಗೆ ಗಮನಹರಿಸಬೇಕು. ನನ್ನ ಮಗಳಿಗಾದ ಸ್ಥಿತಿ ಬೇರೆ ಯಾರಿಗೂ ಆಗಬಾರದು ಎಂದು ಸಾನಿಯಾರ ತಂದೆ ಆಸಿಫ್ ಹೇಳಿದ್ದಾರೆ.

ಮಗಳ ಮೃತ ದೇಹದ ಮುಂದೆ ಗದ್ಗಿತರಾಗಿ ಮಾತನಾಡಿದ ಅವರು, ನನಗೆ ಯಾವುದೇ ಸಹಾಯ ಬೇಡ, ಆದರೆ ಸರಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿ ಮಾಡಿ ಎಂದು ಮನವಿ ಮಾಡಿದ್ದಾರೆ.

ಡೆಂಗಿ ಕಾಯಿಲೆಗೆ ಸರಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗಬಾರದು ಸರಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News