ಚಿಕ್ಕಮಗಳೂರು | ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹಣ ಪಡೆದ ಆರೋಪ: ಪ್ರಾಂಶುಪಾಲ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

Update: 2024-09-25 07:40 GMT

ಪ್ರಾಂಶುಪಾಲ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು : ಗೈರು ಹಾಜರಾದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಲು ಹಣ ಪಡೆದ ಆರೋಪದ ಮೇಲೆ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ‌, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೀರೂರು ಪ್ರಥಮ ದರ್ಜೆ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಟಿ. ಹರೀಶ್ ಎಂಬವರ ಮೂಲಕ ವಿದ್ಯಾರ್ಥಿಗಳಲ್ಲಿ ಹಣದ ಬೇಡಿಕೆಯನ್ನು ಇಟ್ಟು ಹಣ ಪಡೆದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಎಂಬವರು ಫೋನ್ ಪೇ ಮೂಲಕ 10 ಸಾವಿರ ರೂ, ಪಡೆದಿದ್ದು, ಹಾಗೂ ಪ್ರಾಂಶುಪಾಲ ಎಂ.ಕೆ. ಪ್ರವೀಣ್ ಕುಮಾರ್ 5 ಸಾವಿರ ರೂ. ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲ ಎಂ.ಕೆ ಪ್ರವೀಣ್ ಕುಮಾರ್ ಮತ್ತು ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿದ್ದಾರೆ ಎಂದು ತಿಳಿದು ಬಂದಿದೆ.

ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ತಿರುಮಲೇಶ್, ಬಿ.ಮಲ್ಲಿಕಾರ್ಜುನ್, ಅನಿಲ್ ರಾಥೋಡ್ ಇತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News