ಚಿಕ್ಕಮಗಳೂರು: ರಸ್ತೆ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಮೃತ್ಯು

Update: 2023-12-19 13:26 GMT

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣಿನೊಳಗೆ ಸಿಲುಕಿದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಮೃತ ಪಟ್ಟಿರುವ ಘಟನೆ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಮುಜೀಬುರ್ ಎಂದು (30) ಗುರುತಿಸಲಾಗಿದ್ದು, ಜೆಸಿಬಿಯಿಂದ ಮಣ್ಣು ತೆಗೆಯುವ ವೇಳೆ  ಮಣ್ಣು ಕುಸಿದಿದ್ದರಿಂದ ಅನಾಹುತ ಸಂಭವಿಸಿದೆ. ಮಣ್ಣಿನೊಳಗೆ ಸಿಲುಕಿದ್ದಇಬ್ಬರ ಪೈಕಿ ಒಬ್ಬರನ್ನು ರಕ್ಷಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಶೃಂಗೇರಿ ಪೊಲೀಸ್ ಭೇಟಿ ಪರಿಶೀಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News