ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

Update: 2023-12-06 18:08 GMT

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಗೆ 50 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಆರೊಪಿಯನ್ನು ಜಯಪುರ ಪೊಲೀಸರು ಬಂಧಿಸಿದ್ದಾರೆ.

ಜಯಪುರ ಪಟ್ಟಣದಲ್ಲಿ ಅಂಗಡಿ ಹೊಂದಿದ್ದು, ಬಾಲಕಿ ಆರೋಪಿಯ ಅಂಗಡಿಗೆ ವಸ್ತು ಕೊಳ್ಳಲು ಬಂದಿದ್ದ ವೇಳೆ ಬಾಲಕಿಯ ದೇಹ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಮನೆಗೆ ಹಿಂದಿರುಗಿ ಬಾಲಕಿ ತನ್ನ ಹೆತ್ತವರಿಗೆ ವಿಷಯ ತಿಳಿಸಿದ್ದಾಳೆ. ತಡ ಮಾಡದ ಪೋಷಕರು ಕೂಡಲೇ ಜಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಜಯಪುರ ಠಾಣಾಧಿಕಾರಿ ಅಂಬರೀಶ್, ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿಕೊಂಡು ಬಂದಿಸಿದ್ದಾರೆಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News