ಚಿಕ್ಕಮಗಳೂರು: ಗುಂಡೇಟಿನಿಂದ ಯುವಕ ಮೃತ್ಯು

Update: 2024-05-17 04:08 GMT

ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ಉಳುವಾಗಿಲು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು ಗುರುತಿಸಲಾಗಿದೆ. ಎದೆಗೆ ತೋಟದ ಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿತ್ತು ಎನ್ನಲಾಗಿದೆ.

ಮೃತದೇಹದ ಸಮೀಪವೇ ತೋಟದ ಬೇಲಿಯಲ್ಲಿ ತೋಟಕೋವಿಯೊಂದು ಪತ್ತೆಯಾಗಿದೆ. ಶಿಕಾರಿಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. 

 ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.ಇದು ಆಕಸ್ಮಿಕವಾಗಿ ಗುಂಡು ತಗುಲಿ ಆಗಿರುವ ಸಾವೇ ಅಥವಾ ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆಯೇ ? ಈ ಬಗ್ಗೆ ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮೃತ ಸಂಜು ಕೆರೆಮಕ್ಕಿ ಗ್ರಾಮದ ದಿವಂಗತ ಜೂಲೇಗೌಡ ಎಂಬವರ ಪುತ್ರ. ಅವಿವಾಹಿತನಾಗಿದ್ದು, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News