ಚಿಕ್ಕಮಗಳೂರು | ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ : 28 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ವಶಕ್ಕೆ

Update: 2024-06-03 14:05 GMT

ಚಿಕ್ಕಮಗಳೂರು : ಮನೆ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು ಆತನಿಂದ 28 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ಹಾಸನ ನಗರದ ರಿಯಾಝ್ ಖಾನ್ (54) ಬಂಧಿತ ಆರೋಪಿಯಾಗಿದ್ದು, ಆರೋಪಿಯಿಂದ ಕಳ್ಳತನ ಮಾಡಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬಂಧಿತನಿಂದ 350 ಗ್ರಾಂ.ಚಿನ್ನಾಭರಣ, 1ಕೆ.ಜಿ.788 ಗ್ರಾಂ. ಬೆಳ್ಳಿಯ ಆಭರಣ ಹಾಗೂ 4ಕೆ.ಜಿ ಕಂಚಿನ ಪಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ನಗರ ಠಾಣಾ ವ್ಯಾಪ್ತಿಯ ಕೋಟೆ ಬಡಾವಣೆಯಲ್ಲಿ ವ್ಯಕ್ತಿಯೊಬ್ಬರು ಮನೆಗೆ ಬೀಗಹಾಕಿ ಬೇರೆ ಕಡೆಗೆ ತೆರಳಿದ್ದರು. ಮರುದಿನ ಬಂದು ನೋಡಿದಾಗ ಮನೆಯ ಹಿಂಬಾಗಿಲು ಮುರಿದು ಲಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಬಿದ್ದ ಪೊಲೀಸರು ಆರೋಪಿ ರಿಯಾಝ್ ಖಾನ್‍ನನ್ನು ಬಂಧಿಸಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಮನೆ ಕಳ್ಳತನದ ಆರೋಪಿ ರಿಯಾಝ್ ಖಾನ್ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ 12 ಪ್ರಕರಣ, ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ಪ್ರಕರಣ ಸೇರಿದಂತೆ ಒಟ್ಟು 17 ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News