ಚಿಕ್ಕಮಗಳೂರು | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4.21 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರಾಭರಣಗಳು ವಶಕ್ಕೆ

Update: 2024-03-26 15:49 GMT

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳ ನಿಯಂತ್ರಣಕ್ಕೆ ಜಿಲ್ಲಾದ್ಯಂತ ಗಡಿ ಭಾಗಗಳಲ್ಲಿ ಚುನಾವಣಾಧಿಕಾರಿಗಳ ತಂಡ ಮಂಗಳವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 4.21 ಕೋ. ರೂ. ಮೌಲ್ಯದ ಚಿನ್ನಾ, ವಜ್ರ, ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲೆಯ ತರೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಎಂಸಿ ಹಳ್ಳಿ ಚೆಕ್‍ಪೋಸ್ಟ್ ನಲ್ಲಿ ಬೆಂಗಳೂರಿನಿಂದ ಆಗಮಿಸಿದ್ದ ಕ್ಯಾಂಪರ್ ಸರಕು ಸಾಗಣೆ ವಾಹನವನ್ನು ಮಂಗಳವಾರ ಚುನಾವಣಾಧಿಕಾರಿಗಳು ಮತ್ತು ಪೊಲೀಸರು ತಪಾಸಣೆ ಮಾಡಿದ್ದು, ಈ ವೇಳೆ 4ಕೋಟಿ ಮೌಲ್ಯದ 6ಕೆಜಿ 586 ಗ್ರಾಪಂ ಚಿನ್ನಾಭರಣ, 2.47 ಲಕ್ಷ ರೂ. ಮೌಲ್ಯದ ಬೆಳ್ಳಿಯ ಆಭರಣಗಳು ಹಾಗೂ 17.47 ಲಕ್ಷ ರೂ. ಮೌಲ್ಯದ 1ಕೆಜಿ 71ಗ್ರಾಂ ವಜ್ರಾಭರಣಗಳು ಪತ್ತೆಯಾಗಿದೆ. ಈ ಆಭರಣಗಳಿಗೆ ಸೂಕ್ತ ದಾಖಲೆಗಳನ್ನು ನೀಡದ ಹಿನ್ನೆಲೆಯಲ್ಲಿ ಅಧಿಕಾರಿಗಳು ಚಿನ್ನಾ, ಬೆಳ್ಳಿ, ವಜ್ರದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ  ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News