ಚಿಕ್ಕಮಗಳೂರು | ಕೃಷಿ ಹೊಂಡದ ನೀರಲ್ಲಿ ಮುಳುಗಿ ಬಾಲಕ ಮೃತ್ಯು

Update: 2024-06-18 09:47 GMT

ಚಿಕ್ಕಮಗಳೂರು, ಜೂ.18: ಕೃಷಿ ಹೊಂಡದಲ್ಲಿ ಶೇಖರಣೆಗೊಂಡಿದ್ದ ನೀರಿನಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ನಡೆದಿದೆ.

ಮೃತರನ್ನು ಪೂರ್ಣೇಶ್ (16) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಈತ ಶಾಲೆಗೆ ರಜೆ ಇದ್ದ ಕಾರಣ ಊರಿಗೆ ಆಗಮಿಸಿದ್ದ. ಕೃಷಿ ಹೊಂಡದ ಆಳದ ಅರಿವಿಲ್ಲದ ಪೂರ್ಣೇಶ್ ಈಜಲು ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News