ಚಿಕ್ಕಮಗಳೂರು | ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪ : ಮೂವರ ಬಂಧನ
Update: 2024-10-14 14:37 GMT
ಚಿಕ್ಕಮಗಳೂರು : ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್ ಮತ್ತು ಹಶಿಶ್ ಎಣ್ಣೆಯನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ನಗರದ ಉಪ್ಪಳ್ಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ನಗರದ ಉಪ್ಪಳ್ಳಿಯಲ್ಲಿ ಎಂಡಿಎಂಎ ಕ್ರಿಸ್ಟಲ್ ಮತ್ತು ಹಶಿಶ್ ಎಣ್ಣೆಯನ್ನು ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಸಿಇಎನ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 11 ಗ್ರಾಂ. ಎಂಡಿಎಂಎ ಕ್ರಿಸ್ಟಲ್ ಹಾಗೂ 86 ಗ್ರಾಂ. ಹಶಿಶ್ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.