ಮುಂದುವರಿದ ಮಳೆ ಅಬ್ಬರ: ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ

Update: 2024-06-28 05:00 GMT

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಜೂ.28: ಕಾಫಿನಾಡಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಿ ತಹಶೀಲ್ದಾರ್ ಪರಮಾನಂದ ಆದೇಶಿಸಿದ್ದಾರೆ.

ತಾಲೂಕಿನಾದ್ಯಂತ ಭಾರೀ ಗಾಳಿಯೊಂದಿಗೆ ಬಿಟ್ಟು-ಬಿಟ್ಟು ಸುರಿಯುತ್ತಿರುವ ಮಳೆ ಕಾರಣ ವಿದ್ಯಾರ್ಥಿಗಳ ಓಡಾಟಕ್ಕೆ ಸಮಸ್ಯೆ ಇರೋದ್ರಿಂದ ಮುಂಜಾಗ್ರತಾ ಕ್ರಮವಾಗಿ ಈ ಕ್ರಮಕ್ಕೆ ತಾಲೂಕು ಆಡಳಿತ ಮುಂದಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 1ರಿಂದ 10ನೇ ತರಗತಿಯ ಎಲ್ಲಾ ತರಗತಿ ಗಳಿಗೆ ರಜೆ ನೀಡಲಾಗಿದೆ. ಪಿಯುಸಿ ಮತ್ತು ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿಗೆ ಮಾತ್ರ ರಜೆ ಕೊಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News