ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಅಡ್ಡಿ; ಇಬ್ಬರ ವಿರುದ್ಧ ಪ್ರಕರಣ ದಾಖಲು

Update: 2024-02-09 17:34 GMT

ಚಿಕ್ಕಮಗಳೂರು: ನಮೋ ಬ್ರಿಗೇಡ್‍ನಿಂದ ನಗರದಲ್ಲಿ ಗುರುವಾರ ಆಯೋಜಿಸಿದ್ದ ನಮೋ ಭಾರತ್ 2.0 ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಷಣದ ವೇಳೆ ಸೂಲಿಬೆಲೆ ವಿರುದ್ಧ ಬ್ಯಾನರ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಘಟನೆ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಇಬ್ಬರು ವಿರುದ್ಧ ಪ್ರಕರಣ ದಾಖಲಾಗಿದೆ.

ನಗರದ ವಿಜಯಪುರ ಗಣಪತಿ ಪೆಂಡಾಲ್ ಆವರಣದಲ್ಲಿ ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ನಮೋ ಭಾರತ್ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಸೂಲಿಬೆಲೆ ಅವರ ಭಾಷಣ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾರ್ಯಕ್ರಮ ವಿರೋಧಿಸಿ ಬ್ಯಾನರ್ ಕಟ್ಟಲು ಮುಂದಾದ ಸುಮನ್ ಮತ್ತು ದರ್ಶನ್ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಅವಾಚ್ಯ ಶಬ್ಧಗಳಿಂದ ನಿಂಧಿಸಿ ಚಾಕು ಹಿಡಿದು ಕೊಲೆ ಮಾಡಲು ಯತ್ನಿಸಿದ್ದರು ಎಂದು ಬಿಜೆಪಿ ಕಾರ್ಯಕರ್ತ ರಾಜೇಶ್ ಎಂಬವರು ನೀಡಿದ ದೂರಿನ ಆಧಾರ ಮೇಲೆ ಪ್ರಕರಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಸುಮನ್ ಮತ್ತು ದರ್ಶನ್ ಅವರನ್ನು ಬಂಧಿಸಿದ ಪೊಲೀಸರು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News