ಚಿಕ್ಕಮಗಳೂರು | ಕೊಳೆತ ಸ್ಥಿತಿಯಲ್ಲಿ ಕಾಡಾನೆಯ ಕಳೇಬರ ಪತ್ತೆ
Update: 2025-01-31 21:10 IST

ಚಿಕ್ಕಮಗಳೂರು : ತಾಲೂಕಿನ ಮರಗುಂದ ಗ್ರಾಮ ವ್ಯಾಪ್ತಿಯ ಅರಣ್ಯದಲ್ಲಿ ಕಾಡಾನೆಯೊಂದರ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಮೂಡಿಗೆರೆ ಹಾಗೂ ಸಕಲೇಶಪುರ ಅರಣ್ಯ ವಲಯದ ಗಡಿ ಪ್ರದೇಶದವಾದ ಮರಗುಂದ ಗ್ರಾಮ ಸಮೀಪದ ಅರಣ್ಯದಲ್ಲಿ ಕಲ್ಲು ಬಂಡೆಗಳ ಮಧ್ಯೆ ಕಾಡಾನೆ ಕಳೇಬರ ಪತ್ತೆಯಾಗಿದ್ದು, ಬಂಡೆಗಳ ನಡುವೆ ಸಿಲುಕಿ ಆನೆ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ.
ಆನೆ ಮೃತಪಟ್ಟು 15 ದಿನ ಕಳೆದಿರಬಹುದು ಎಂದು ಹೇಳಲಾಗುತ್ತಿದ್ದು, ಆನೆಯ ಬಹುತೇಕ ಭಾಗ ಕೊಳೆತು ಹೋಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನಡೆಯಲಿದೆ.