ತರೀಕೆರೆ: ಕಾಡಾನೆ ದಾಳಿಗೆ ರೈತ ಬಲಿ
Update: 2025-03-31 21:00 IST

ಸಾಂದರ್ಭಿಕ ಚಿತ್ರ
ತರೀಕೆರೆ: ಕಾಡಾನೆ ದಾಳಿಗೆ ರೈತ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ (58) ಮೃತಪಟ್ಟ ರೈತ.
ಮನೆಯ ಮುಂಭಾಗ ನಿಂತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಮನೆಯ ಮುಂಭಾಗದಿಂದ 20 ಮೀಟರ್ ದೂರದಲ್ಲಿ ಮೃತದೇಹ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತರೀಕೆರೆ ತಾಲೂಕಿನ ತಣಿಗೆಬೈಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಿರಂತರವಾಗಿ ಗುರುಪುರ ಗ್ರಾಮದಲ್ಲಿ ಸಂಚಾರ ಮಾಡುತ್ತಿದ್ದ ಕಾಡಾನೆಯನ್ನು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಮನವಿ ಮಾಡಿದ್ದಾರೆ.