ಶೃಂಗೇರಿ: ರಸ್ತೆ ಅಪಘಾತ ವಿಚಾರವಾಗಿ ಹಲ್ಲೆ ಆರೋಪ; ಐವರು ಬಜರಂಗದಳ ಕಾರ್ಯಕರ್ತರ ಬಂಧನ

Update: 2025-02-10 22:46 IST
ಶೃಂಗೇರಿ: ರಸ್ತೆ ಅಪಘಾತ ವಿಚಾರವಾಗಿ ಹಲ್ಲೆ ಆರೋಪ; ಐವರು ಬಜರಂಗದಳ ಕಾರ್ಯಕರ್ತರ ಬಂಧನ
  • whatsapp icon

ಚಿಕ್ಕಮಗಳೂರು: ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ಬಜರಂಗದಳದ ಕಾರ್ಯಕರ್ತರೆನ್ನಲಾದ ತಂಡವು ಇಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣೆಯಲ್ಲಿ ರವಿವಾರ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಸೋಮವಾರ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಉಡುಪಿ, ಕೊಪ್ಪ ಮೂಲದ ಕುಟುಂಬದವರ ಕಾರು ರವಿವಾರ ಮಲೆನಾಡು ಭಾಗದ ಪ್ರಸಿದ್ಧ ದರ್ಗಾಕ್ಕೆ ಭೇಟಿ ನೀಡಿದ್ದರು. ಬಳಿಕ ಹಿಂದಿರುಗುತ್ತಿದ್ದ ವೇಳೆ ಇವರಿದ್ದ ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಕಾರು ಬೈಕ್ಗೆ ಢಿಕ್ಕಿಯಾದರೂ ಕಾರನ್ನು ನಿಲ್ಲಿಸದೆ ಹಿಟ್ ಆ್ಯಂಡ್ ರನ್ ಮಾಡಿದ್ದಾರೆಂದು ಆರೋಪಿಸಿ ಶೃಂಗೇರಿ ಬಸ್ ನಿಲ್ದಾಣದ ಬಳಿ ಬಜರಂಗದಳದ ಕಾರ್ಯಕರ್ತರೆನ್ನಲಾದವರು ಕಾರನ್ನು ಅಡ್ಡಗಟ್ಟಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಹಲ್ಲೆಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶೃಂಗೇರಿ ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಗಾಯಾಳುಗಳ ಸಂಬಂಧಿಕರು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಘಟನಾ ಸ್ಥಳ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಬೈಕ್-ಕಾರು ಅಪಘಾತ ಪ್ರಕರಣ ಹಾಗೂ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ ದೂರು, ಪ್ರತಿ ದೂರು ದಾಖಲಾಗಿತ್ತು.

ಶೃಂಗೇರಿ ತಾಲೂಕಿನವರಾದ ನಾಗೇಂದ್ರ, ರವಿಸಂಜಯ್, ಕೀರ್ತನ್, ಪ್ರಸಾದ್ ಹಾಗೂ ರಜತ್ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಓಮ್ನಿ ಕಾರು, ಹೋಂಡಾ ಆಕ್ಟಿವಾ ಸ್ಕೂಟಿ, ಎರಡು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಪ್ರಗತಿಯಲ್ಲಿದೆ.

ಡಾ.ವಿಕ್ರಮ್ ಅಮಟೆ, ಎಸ್ಪಿ

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News