ಶಿವಣ್ಣ ಆಸ್ತಿ ಮೌಲ್ಯ ಎಷ್ಟು ಗೊತ್ತೇ?; ಗೀತಾ ಶಿವರಾಜಕುಮಾರ್ ಅಫಿಡವಿಟ್‌ನಲ್ಲಿ ಬಹಿರಂಗ

Update: 2024-04-15 16:49 GMT

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅಫಿಡವಿಟ್ ಸಲ್ಲಿಕೆ ಮಾಡಿದ್ದಾರೆ. ಇರದಲ್ಲಿ ನಟ ಶಿವರಾಜ್‌ಕುಮಾರ್ ಅವರ ಆಸ್ತಿ ವಿವರವನ್ನು ಸಲ್ಲಿಕೆ ಮಾಡಿದ್ದಾರೆ. ಶಿವಣ್ಣ ಅವರ ನಿಜವಾದ ಹೆಸರು ಎಂಎಸ್ ಪುಟ್ಟಸ್ವಾಮಿ. ಇದೇ ಹೆಸರಲ್ಲಿ ವಿವರ ಇದೆ. 2022-2023 ಆರ್ಥಿಕ ವರ್ಷದಲ್ಲಿ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. ಅದೇ ವರ್ಷ ಗೀತಾ ಅವರು 1,48,63,750 ಕೋಟಿ ರೂಪಾಯಿ ಆದಾಯ ಹೊಂದಿದ್ದಾರೆ.  ಶಿವಣ್ಣ ಬಳಿ 22,58,338 ರೂಪಾಯಿ ನಗದು ಇದೆ. ಗೀತಾ ಅವರ ಬಳಿ 3 ಲಕ್ಷ ರೂಪಾಯಿ ನಗದು ಇದೆ.

ಶಿವರಾಜ್‌ಕುಮಾರ್ ಬಳಿ ಬ್ಯಾಂಕ್ ಬ್ಯಾಲೆನ್ಸ್ 4.82 ಕೋಟಿ ರೂಪಾಯಿ ಇದೆ. ಗೀತಾ ಅವರ ಬ್ಯಾಂಕ್ ಬ್ಯಾಲೆನ್ಸ್ 64 ಲಕ್ಷ ರೂಪಾಯಿ ಇದೆ. ಶಿವಣ್ಣ ಬಳಿ 18 ಕೋಟಿ ರೂಪಾಯಿ ಹಾಗೂ ಗೀತಾ ಬಳಿ 5 ಕೋಟಿ ರೂಪಾಯಿ ಚರಾಸ್ತಿ ಇದೆ. ಸ್ಥಿರಾಸ್ತಿ ವಿಚಾರಕ್ಕೆ ಬಂದರೆ ಶಿವಣ್ಣ ಬಳಿ 31 ಕೋಟಿ ಬೆಲೆ ಬಾಳುವ ಸ್ಥಿರಾಸ್ತಿ ಇದೆ. ಗೀತಾ ಬಳಿ 34 ಕೋಟಿ ರೂಪಾಯಿ ಸ್ಥಿರಾಸ್ತಿ ಇದೆ.

ಸಾಲದ ವಿಚಾರಕ್ಕೆ ಬಂದರೆ ಶಿವಣ್ಣನಿಗೆ 17 ಕೋಟಿ ರೂಪಾಯಿ ಸಾಲ/ಅಡ್ವಾನ್ಸ್ ಇದೆ. ಇದರಲ್ಲಿ ಸಾಲ 3 ಕೋಟಿ ರೂಪಾಯಿ, ಅಡ್ವಾನ್ಸ್ 13.6 ಕೋಟಿ ರೂಪಾಯಿ. ಗೀತಾ ಅವರದ್ದು 7 ಕೋಟಿ ರೂಪಾಯಿ ಸಾಲ ಇದೆ. ಸಿನಿ ಮುತ್ತು ಸರ್ವಿಸ್‌ಗೆ 1.64 ಕೋಟಿ ರೂಪಾಯಿ, ಗೀತಾ ಪಿಕ್ಚರ್ಸ್‌ಗೆ 6 ಕೋಟಿ ರೂಪಾಯಿ, ಧ್ರುವಕುಮಾರ್‌ಗೆ 2.30 ಕೋಟಿ ರೂಪಾಯಿ ಹಾಗೂ ಇತರರಿಗೆ 2.13 ಕೋಟಿ ರೂಪಾಯಿ ಸಾಲ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News