ಕಡೂರು | ವಾಕ್ ವೇ ಬ್ರಿಡ್ಜ್ ಗೆ ಸರಕಾರಿ ಬಸ್ ಢಿಕ್ಕಿ: ಐವರಿಗೆ ಗಾಯ

Update: 2024-03-23 06:44 GMT

ಚಿಕ್ಕಮಗಳೂರು, ಮಾ.23: ಸರಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ವಾಕ್ ವೇ ಬ್ರಿಡ್ಜ್ ಗೆ ಢಿಕ್ಕಿ ಹೊಡೆದ ಘಟನೆ ಕಡೂರು ತಾಲೂಕಿನ ಅಂಚೆ ಚೋಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಇಂದು ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಐವರು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಡೂರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್ ಅಂಚೆ ಚೋಮನಹಳ್ಳಿ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ವಾಕ್ ವೇ ಬ್ರಿಡ್ಜ್ ನ ಪಿಲ್ಲರ್ ಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಾಯಗೊಂಡಿರುವ ಐವರು ಪ್ರಯಾಣಿಕರನ್ನು ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ಬಸ್ ಜಖಂಗೊಂಡಿದೆ.

ಈ ಬಗ್ಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News