ಕಡೂರು: ಪಿಸ್ತೂಲ್ ಹಿಡಿದು ತಿರುಗಾಡುತ್ತಿದ್ದ ವ್ಯಕ್ತಿಯ ಬಂಧನ

Update: 2023-10-09 07:21 GMT

ಚಿಕ್ಕಮಗಳೂರು, ಅ.9: ಸಾರ್ವಜನಿಕವಾಗಿ ಪಿಸ್ತೂಲ್ ಸಹಿತ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಕಡೂರು ತಾಲೂಕಿನಲ್ಲಿ ರವಿವಾರ ನಡೆದಿದೆ.

ಬೀರೂರು ಮೂಲದ ಸಮೀರ್ ಬಂಧಿತ ಆರೋಪಿ. ಬಂಧಿತನಿಂದ ಒಂದು ಲೋಡೆಡ್ ಪಿಸ್ತೂಲ್, ಹತ್ತು ಸಜೀವ ಗುಂಡುಗಳು, ಎರಡು ಚಾಕು, ಒಂದು ಡ್ರಾಗರ್, 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗಾಂಜಾ ವ್ಯಸನಿಯಾಗಿದ್ದ ಸಮೀರ್, ರವಿವಾರ ರಾತ್ರಿ ವೇಳೆ ಕಡೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುತ್ತಿದ್ದ ಅಲ್ಲದೆ ಸಾರ್ವಜನಿಕ ರಿಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಇದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರ ಸಹಕಾರದಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಆರೋಪಿ ಸಮೀರ್ ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ವೃತ್ತಿ ಮಾಡುತ್ತಿದ್ದ ಎನ್ನಲಾಗುತ್ತಿದ್ದು, ಅಕ್ರಮವಾಗಿ ಗನ್ ಖರೀದಿಸಿ ತನ್ನ ಇಟ್ಟುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News