ಕಳಸ | ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Update: 2024-05-26 16:20 GMT

ಕಳಸ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ಸಂಜೆ ತಾಲೂಕಿನ ತಾರಿಕೊಂಡ ಗ್ರಾಮದಲ್ಲಿ ವರದಿಯಾಗಿದೆ.

ಕಳಸ ಪಟ್ಟಣ ಸಮೀಪದ ಹಳುವಳ್ಳಿ ತಾರಿಕೊಂಡ ಗ್ರಾಮದ ನಿವಾಸಿ ರಮ್ಯಾ(21) ಆತ್ಮಹತ್ಯೆ ಮಾಡಿಕೊಂಡಿರುವ ಕಾಲೇಜು ವಿದ್ಯಾರ್ಥಿಯಾಗಿದ್ದು, ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.

ರವಿವಾರ ಯುವತಿಯ ಪೋಷಕರು ನೆಂಟರೊಬ್ಬರ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದರು.ಆದರೆ ಸಂಜೆ ಮದುವೆ ಮುಗಿಸಿಕೊಂಡು ಮನೆಗೆ ಬಂದಾಗ ರಮ್ಯಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಮೃತದೇಹವನ್ನು ಕಳಸ ಸರಕಾರಿ ಆಸ್ಪತ್ರೆಗೆ ತರಲಾಗಿದ್ದು, ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜು ಯುವತಿಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿದು ಬರಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News